ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ನಿಷೇಧ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಹಲಾಲ್ ವಿವಾದ ಆರಂಭವಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈವರೆಗೆ ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿಲ್ಲ, ಮುಂದೆಯೂ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಹಲಾಲ್ ವಿರುದ್ಧ ಅಭಿಯಾನ ಆರಂಭವಾಗಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಯಾವುದಕ್ಕೆ ಪ್ರತಿಕ್ರಿಯೆ ಕೊಡಬೇಕು, ಯಾವುದಕ್ಕೆ ಕೊಡಬಾರದು ಎಂಬುದು ಗೊತ್ತಿದೆ. ಯಾವುದಕ್ಕೆ ಪ್ರತಿಕ್ರಿಯಿಸಬೇಕು ಅದಕ್ಕೆ ಕೊಡುತ್ತೇವೆ. ಇದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಸರ್ಕಾರದ ನಿಲುವು ಏನು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.
ಅಮಿತ್ ಶಾ ರಾಜ್ಯ ಪ್ರವಾಸ; ಸಮಗ್ರ ಮಾಹಿತಿ ನೀಡಿದ CM
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ