ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಯುಗಾದಿ ಹಬ್ಬಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಶೇ.3ರಷ್ಟು ಹೆಚ್ಚಳ ಮಾಡಿದ್ದು, 1.16 ಕೋಟಿ ನೌಕರರು ಹಾಗೂ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಮೂಲ ವೇತನದ ಶೇ.31ರಷ್ಟಿದ್ದ ತುಟ್ಟಿಭತ್ಯೆ ಈಗ ಶೇ.34ಕ್ಕೆ ಏರಿಕೆಯಾಗಿದೆ.
ಗೃಹಿಣಿಯರಿಗಾಗಿ “ಧರಿತ್ರಿ ಫ್ಯಾಶನ್ ಶೋ”
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ