
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚರಿಸುತ್ತಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಗೃಹ ಸಚಿವ ಅಮಿತ್ ಶಾ ಅವರು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿಗೆ ವಾಪಸ್ ಆದವರೇ ಮೌಂಟ್ ಕಾರ್ಮೆಲ್ ಕಾಲೇಜು ಮಾರ್ಗವಾಗಿ ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಆದರೆ ಅವರು ಸಂಚರಿಸುವ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಅಂಡರ್ ಗ್ರೌಂಡ್ ಎಲೆಕ್ಟ್ರಿಕ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡ್ರೈನೇಜ್ ಮೇಲೆ ಕಾರು ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಡರ್ ಗ್ರೌಂಡ್ ಕೇಬಲ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಮಿತ್ ಶಾ ತೆರಭೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಹಿನ್ನೆಲೆಯಲ್ಲಿ ಅರಮನೆ ಮೈದಾನಕ್ಕೆ ಹೋಗುವ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
150 ಸ್ಥಾನ ಗೆಲ್ಲಲೇಬೇಕು; ಕಾಂಗ್ರೆಸ್ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ