Latest

ಕಾಂಗ್ರೆಸ್ ಬಿಡುವ ಬಗ್ಗೆ ಕುಮಠಳ್ಳಿ ಏನಂದ್ರು?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಳೆದ 25 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಶಾಸಕ ರಮೇಶ ಜಾರಕಿಹೊಳಿ ಮತ್ತು ನಾನು ಕಾಂಗ್ರೆಸ್ ಪಕ್ಷ ಬೀಡುವುದಿಲ್ಲ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತಿಂಗಳಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರವಾಗಿ ಚುನಾವಣೆ ಕೆಲಸದಲ್ಲಿ ತೊಡಗಿದ್ದೆ. ಆದ್ದರಿಂದ ಒಂದು ತಿಂಗಳಿಂದ ರಮೇಶ ಜಾರಕಿಹೊಳಿ ಅವರ ಯಾವುದೇ ವಿಷಯಗಳು ನನಗೆ ಗೊತ್ತಿಲ್ಲ ಎಂದರು.
ರಮೇಶ ಜಾರಕಿಹೊಳಿ ರಾಜಿನಾಮೆ ನೀಡಿದರೆ ನೀವು ರಾಜಿನಾಮೆ ನೀಡುತ್ತಿರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button