Latest

ಉರ್ದು ಮಾತಾಡೋಕೆ ಬರಲ್ಲ ಎಂದಿದ್ದಕ್ಕೆ ಯುವಕನ ಹತ್ಯೆ ಎಂದ ಗೃಹ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಜೆಜೆ ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದಿದ್ದಕ್ಕೆ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಜೆಜೆ ನಗರದಲ್ಲಿ ಚಂದ್ರು ಎಂಬ ಯುವಕನ ಹತ್ಯೆ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಯುವಕನಿಗೆ ದುಷ್ಕರ್ಮಿಗಳು ಉರ್ದು ಮಾತನಾಡಲು ಹೇಳಿದ್ದಾರೆ. ಆದರೆ ಯುವಕ ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಎಂದು ಹೇಳಿದ್ದಾನೆ. ಉರ್ದು ಬರಲ್ಲ ಎಂದು ಹೇಳಿದ್ದಕ್ಕೆ ಚಾಕುವಿನಿಂದ ಇರಿದು ಅಮಾನುಷವಾಗಿ ಯುವಕನನ್ನು ಹತ್ಯೆ ಮಾಡಿದ್ದಾರೆ. ಪ್ರಕರಣದ ಬಗ್ಗೆ ನಾನು ಸಂಪೂರ್ಣ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.

ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದು, ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯಕ್ಕೆ ಗಲಾಟೆ ಆರಂಭವಾಗಿದೆ. ಈ ಗಲಾಟೆಗೆ ಇತರರು ಸೇರಿಕೊಂಡಿದ್ದಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಲಾರಿ ಡಿಕ್ಕಿ; ಕಾನ್ಸ್ ಟೇಬಲ್ ಸೇರಿ ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button