ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ ಮಾದರಿಯಲ್ಲಿಯೇ ಪರೀಕ್ಷೆ ನಡೆಸಲಾಗುವುದು. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಶಿಕ್ಷಣ ಇಲಾಖೆ ಶೀಘ್ರದಲ್ಲಿಯೇ ಆದೇಶ ಹೊರಡಿಸಲಿದ್ದು, ಇಲಾಖೆ ಆದೇಶ ಕಡ್ಡಾಯವಾಗಿ ಪಾಲಿಸಬೇಕು ಎಂದರು. ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಪರೀಕ್ಷೆಗೆ ಬರುವಂತಿಲ್ಲ. ಹೈಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡಲಾಗುವುದು ಎಂದು ಹೇಳಿದರು.
ಸಂಪುಟ ವಿಸ್ತರಣೆ: ಸ್ಪಷ್ಟ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ