
ಪ್ರಗತಿವಾಹಿನಿ ಸುದ್ದಿ; ಮುಂಬೈ: ಆರ್ ಬಿ ಐ ಮಾನಿಟರಿ ಪಾಲಿಸಿ ಕಮಿಟಿ ಸಭೆ ನಡೆದಿದ್ದು, ಸತತ 11ನೇ ಬಾರಿಗೆ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ ರೆಪೊ ದರ ಶೇ.4ರಷ್ಟಿದ್ದು, ರಿಸರ್ವ್ ರೆಪೊ ದರ ಶೇ.3.35ರಷ್ಟಿದೆ. ಇದೆ ರೀತಿ ಈಬಾರಿಯೂ ಮುಂದುವರೆಯಲಿದೆ. ಗ್ರಾಹಕರ ಗೃಹ ಸಾಲ, ವೈಯಕ್ತಿಕ ಇಎಂಐ ಸಹ ವ್ಯತ್ಯಾಸವಾಗುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ದೇಶದ ಎಲ್ಲಾ ಎಟಿಎಂ ಗಳಲ್ಲಿ ಕಾರ್ಡ್ ಲೆಸ್ ಕ್ಯಾಶ್ ಸೌಲಭ್ಯ ಕಲ್ಪಿಸಲಾಗುವುದು. ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ಮೂಲಕ ಈ ಸೌಲಭ್ಯವನ್ನು ಎಲ್ಲಾ ಬ್ಯಾಂಕ್ ಹಾಗೂ ಎಟಿಎಂಗಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಕಾರ್ಡ್ರಹಿತ ಪಾವತಿ ವಿಧಾನಗಳ ಅಳವಡಿಕೆಯಿಂದ ಸ್ಕಿಮಿಂಗ್ ಮತ್ತು ಕಾರ್ಡ್ ಕ್ಲೋನಿಂಗ್ನಂಥ ಅಕ್ರಮಗಳನ್ನೂ ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಬಂಡವಾಳ ಹೂಡಿಕೆದಾರರ ವಿಶ್ವಾಸ ಕಳೆದುಕೊಳ್ಳುತ್ತಿದೆಯೇ ಕರ್ನಾಟಕ ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ