Karnataka NewsLatest

ವಿಶ್ವದಲ್ಲಿ ಹೆಣ್ಣು ಸರ್ವಶ್ರೇಷ್ಠ: ಶ್ರೀಮಂತ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಕಾಗವಾಡ –  ಜಗತ್ತಿನಲ್ಲಿ  ಎಲ್ಲಕ್ಕಿಂತ ಶ್ರೇಷ್ಠವಾದದ್ದು ಹೆಣ್ಣು. ಹೆಣ್ಣು ಮನೆಯ ನಂದಾದೀಪ, ನಮ್ಮ ಈ ಕನ್ನಡನಾಡಿನಲ್ಲಿ ಮಹಿಳೆಯರ ಸಾಧನೆ ವಿಶೇಷವಾದದ್ದು,   ಮಹಿಳೆಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ, ಶಾಸಕ ಶ್ರೀಮಂತ ಪಾಟೀಲ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಕಾಗವಾಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಕಾಗವಾಡ ಇವರ ಸಂಯುಕ್ತ ಆಶ್ರಯದಲ್ಲಿ *ಉಗಾರ ಖುರ್ದದ ಶ್ರೀಹರಿ ವಿದ್ಯಾಲಯದಲ್ಲಿ ಆಯೋಜಿಸಿದ ತಾಲೂಕಾ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಕವಲಗುಡ್ಡದ ಸಿದ್ದಾಶ್ರಮದ  ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ   ಶ್ರೀಮಂತ (ತಾತ್ಯಾ) ಪಾಟೀಲ* ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ  ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ, ಈ ಸಮಾರಂಭದಲ್ಲಿ ಮಹಿಳಾ ಸಾಧಕರನ್ನು ಸನ್ಮಾನಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
 ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ, ಬಾಲ್ಯ ವಿವಾಹ ಪದ್ಧತಿಯನ್ನು ನಾವೆಲ್ಲರೂ ಸೇರಿ ಹೋಗಲಾಡಿಸೋಣ ಎಂದು ಪ್ರತಿಜ್ಞೆ ಮಾಡಲಾಯಿತು. ಕಾಗವಾಡ ತಾಲೂಕ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಹಿಳಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಐನಾಪುರ ಪಟ್ಟಣದ ಕುಮಾರಿ ಪಲ್ಲವಿ ಪಾಟೀಲ್ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು, ಅವರನ್ನು ಸನ್ಮಾನಿಸಲಾಯಿತು.
 ಅದೇ ರೀತಿ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿದ  ಮಹಿಳೆಯರನ್ನು ಗೌರವಿಸಿ ಸನ್ಮಾನಿಸಲಾಯಿತು.
 ಈ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾದ  ಜಗದೀಶ ಗೌಡಪ್ಪ ಪಾಟೀಲ, ಕಾಗವಾಡ ತಹಸಿಲ್ದಾರ್  ರಾಜೇಶ್ ಆರ್ ಬುರ್ಲಿ, ಕಾಗವಾಡ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ  ವೀರನಗೌಡ ಏಗನಗೌಡರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾಗವಾಡ ಶಾಖೆಯ ಅಧ್ಯಕ್ಷ ಗೌಡಪ್ಪ ಸಡ್ಡಿ, ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಮುಂಜೆ, ಕಾಗವಾಡ ಸಿಡಿ ಪಿ ಓ  ಸಂಜೀವಕುಮಾರ ಸದಲಗಿ, ಕಾಗವಾಡ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಪುಷ್ಪಲತಾ ಸುಣ್ಣದಕಲ್ಲ, ಐನಾಪುರ ಪಟ್ಟಣದ   ನ್ಯಾಯಾಧೀಶರಾಗಿ ಆಯ್ಕೆಯಾದ  ಪಲ್ಲವಿ ಪಾಟೀಲ, ಅಥಣಿ ಜೆ.ಎ. ಪ. ಪೂ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಪ್ರಿಯವಂದಾ ಹುಲಗಬಾಳಿ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಪ್ರವೀಣ ಹುಣಸಿಕಟ್ಟಿ,ಕೆ ಕೆ ಕುಲಕರ್ಣಿ ಸೇರಿದಂತೆ ತಾಲೂಕಾ ಮಟ್ಟದ ಹಲವಾರು ಅಧಿಕಾರಿ ವರ್ಗದವರು, ನೌಕರರ ಸಂಘದ ಪದಾಧಿಕಾರಿಗಳು, ಉಗಾರ ಖುರ್ದು ಪುರಸಭೆಯ ಸದಸ್ಯರು, ತಾಲೂಕ ಮಟ್ಟದ  ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button