Latest

ಶಿಶುಪಾಲನಾ ರಜೆ: ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂದ ಹೊರಟ್ಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಬಗ್ಗೆ 2021-22ನೇ ಸಾಲಿನ ಆಯ-ವ್ಯಯದ ಭಾಷಣದಲ್ಲಿ ಕಂಡಿಕೆ 37 ರಲ್ಲಿ ರಾಜ್ಯ ಸರಕಾರದ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಘೋಷಿಸಿ ಸರ್ಕಾರಿ ಆದೇಶ ಸಂಖ್ಯೆ: ಆಇ4(ಇ) ಸೇನಿಸೇ 2021, ದಿನಾಂಕ: 21-06-2021ರಂದು ಆದೇಶ ಹೊರಡಿಸಲಾಗಿದೆ.

ಈ ಕುರಿತು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಿಗೆ ಪ್ರತ್ಯೇಕವಾದ ಸೂಕ್ತ ತಿದ್ದುಪಡಿ ತರಲಾಗಿದೆ. ಆದರೆ ಈ ಸೌಲಭ್ಯವನ್ನು ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೆ ವಿಸ್ತರಿಸಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆಯಡಿ 1999 ರಲ್ಲಿ ರೂಪಿಸಲಾದ ನಿಯಮಗಳಲ್ಲಿ 5ನೇ ಅಧ್ಯಾಯದ 26ನೇ ಕಂಡಿಕೆಯಲ್ಲಿ ಸಾಮಾನ್ಯ ನಿಯಮಾವಳಿ-1 ರ ರಜೆ ನಿಯಮಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದಂತೆ “ರಜೆ ನಿಯಮಗಳಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಇರುವ ರಜಾ ನಿಯಮಗಳಿಗಳು ತನ್ನಿಂದ ತಾನೇ ಅನುದಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗಬೇಕು” ಎಂದು ಸ್ಪಷ್ಟವಾಗಿದ್ದರೂ ಕೂಡಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗೂ ಬೋಧಕೇತರ ಮಹಿಳಾ ಸಿಬ್ಬಂದಿಗೆ ಶಿಶುಪಾಲನಾ ರಜಾ ಸೌಲಭ್ಯವನ್ನು ವಿಸ್ತರಿಸಿರುವದಿಲ್ಲ.

ಇದರಿಂದಾಗಿ ಸರಕಾರವು ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ನೀತಿಯನ್ನು ಪಾಲಿಸುತ್ತದೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ ಎಂದು ಅವರು ಹೇಳಿದ್ದಾರೆ.

 ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರಿಗೆ ಮಂಜೂರು ಮಾಡಿದ 180 ದಿನಗಳ ಶಿಶುಪಾಲನಾ ರಜೆಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೂ ವಿಸ್ತರಿಸಲು ನಿಯಮಗಳಲ್ಲಿ ಅವಕಾಶವಿರುವದರಿಂದ ಕೂಡಲೇ ಸರಕಾರಿ ಆದೇಶವನ್ನು ಹೊರಡಿಸುವಂತೆ ಅವರು ಆಗ್ರಹಿಸಿದ್ದಾರೆ.

https://pragati.taskdun.com/karnataka-news/childcare-leave-historical-order-by-state-government-heres-comprehensive-information/

https://pragati.taskdun.com/karnataka-news/beo-sanctioned-childcare-leave-states-first-case/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button