ಪ್ರಗತಿ ಮೀಡಿಯಾ ಹೌಸ್, ಬೆಳಗಾವಿ
ಬೆಳಗಾವಿಯಲ್ಲಿ ಶನಿವಾರ ಮಧ್ಯಾಹ್ನ ಮಳೆ, ಗಾಳಿ, ಗುಡುಗು, ಸಿಡಿಲು ಅಬ್ಬರಿಸಿದೆ. ಈ ವೇಳೆ ನಗರಾದ್ಯಂತ ಭಾರಿ ಅನಾಹುತ ಸಂಭವಿಸಿದೆ. ಹಲವೆಡೆ ಮರಗಳು ಮನೆಗಳ ಮೇಲೆ, ರಸ್ತೆಗಳ ಮೇಲೆ ಉರುಳಿ ಬಿದ್ದಿವೆ. ಅನೇಕ ಕಡೆ ವಿದ್ಯುತ್ ಕಂಬಗಳು ಬಿದ್ದಿವೆ. ನಗರದ ಬಹುತೇಕ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಈ ಅನಾಹುತಗಳಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದಿರುವ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಸೋಮವಾರ ಅರಣ್ಯಾಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಮಳೆಯ ಅನಾಹುತ ಬಿಂಬಿಸುವ ವೀಡಿಯೋ ಮತ್ತು ಚಿತ್ರಗಳು ಇಲ್ಲಿವೆ….
ಬೆಳಗಾವಿಯಲ್ಲಿ ಭಯಾನಕ ಮಳೆ ; ಅಬ್ಬರಿಸಿದ ಗಾಳಿ, ಗುಡುಗು; ಧರೆಗುರುಳಿದ ಮರ, ವಿದ್ಯುತ್ ಕಂಬ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ