ಪ್ರಗತಿವಾಹಿನಿ ಸುದ್ದಿ, ಹೈದರಾಬಾದ್:
ತೆಲಂಗಾಣದ 12ನೇ ತರಗತಿ (ಇಂಟರ್‌ಮೀಡಿಯಟ್) ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ತೆಲಗು ವಿಷಯದಲ್ಲಿ 99 ಅಂಕ ನೀಡುವ ಬದಲು ಸೊನ್ನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಮಾಡಿದ ಹಾಗೂ ಅದನ್ನು ಮರುಪರಿಶೀಲನೆ ಮಾಡಿದ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಅನುತ್ತೀರ್ಣರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 25 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗಾಗಿ ಮೌಲ್ಯಮಾಪನ ಲೋಪವನ್ನು ರಾಜ್ಯ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ