ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ಸಿಐಡಿ ಪೊಲೀಸರಿಗೆ ಶರಣಾಗಿದ್ದಾನೆ.
545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಪ್ರಮುಖ ಆರೋಪಿಯಾಗಿರುವ ಮಂಜುನಾಥ್ ಮೇಳಕುಂದಿ ವಿರುದ್ಧ ಏ.26ರಂದು ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು. ಕಳೆದ 20 ದಿನಗಳಿಂದ ಮಂಜುನಾಥ್ ತಲೆಮರೆಸಿಕೊಂಡಿದ್ದ. ಇದೀಗ ಏಕಾಏಕಿ ಕಲಬುರ್ಗಿ ಸಿಐಡಿ ಕಚೇರಿಗೆ ಆಟೋದಲ್ಲಿ ಬಂದಿರುವ ಮಂಜುನಾಥ್ ಮೇಳಕುಂದಿ ಪೊಲೀಸರಿಗೆ ಶರಣಾಗಿದ್ದಾನೆ.
ನೀರಾವರಿ ಇಲಾಖೆಯ ಎಂಜಿನಿಯರ್ ಆಗಿರುವ ಮಂಜುನಾಥ್ ಮೇಳಕುಂದಿ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯ ಓಎಂಆರ್ ಶೀಟ್ ಅಕ್ರಮವೆಸಗಿದ್ದ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ ನಾಯಕರಿಗೆ ತಲ್ಲಣ ಮೂಡಿಸಿದ ಬಿ.ಎಲ್.ಸಂತೋಷ್ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ