Latest

ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಪರ್ಶಿಸಿ 8 ವರ್ಷದ ಬಾಲಕಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಪರ್ಶಿಸಿ 8 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ.

8 ವರ್ಷದ ಅಂಜಲಿ ಮೃತ ಬಾಲಕಿ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಬಾಲಕಿ ಸಾವಿಗೆ ಕಾರಣ ಎಂದು ಗ್ರಾಮಸ್ಥರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಟವಾಡುತ್ತಿದ್ದ ಬಾಲಕಿ ಟ್ರಾನ್ಸ್ ಫಾರ್ಮರ್ ಬಳಿ ಹೋಗಿದ್ದಾಳೆ. ಈ ವೇಳೆ ದುರಂತ ಸಂಭವಿಸಿದೆ. ಟ್ರಾನ್ಸ್ ಫಾರ್ಮರ್ ಗೆ ಜೆಸ್ಕಾಂ ಸಿಬ್ಬಂದಿಗಳು ಬೇಲಿ ಹಾಕದೇ ಘಟನೆಗೆ ಕಾರಣ ಎನ್ನಲಾಗಿದೆ.

ಕೆಂಬಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಕ್ಷಿಣೆ ಕಿರುಕುಳ; ಐಎಎಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button