ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಟ್ ಕಾಯಿನ್ ಪ್ರಕರಣದ ತನಿಖೆ ಅರ್ಧಕ್ಕೆ ಸ್ಥಗಿತಗೊಂಡಿದೆ. ತನಿಖೆ ಚುರುಕುಗೊಂಡರೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಥಾನಕ್ಕೆ ಮತ್ತೊಬ್ಬರು ಬರುತ್ತಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಟ್ ಕಾಯಿನ್ ತನಿಖೆ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗಲಿದ್ದಾರೆ. ಆದರೆ ಪ್ರಕರಣದ ತನಿಖೆ ಸರಿಯಾಗಿ ನಡೆಸುತ್ತಿಲ್ಲ ಎಂದು ಹೇಳಿದರು.
ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಈಗ ಸಿಐಡಿ ಬಂಧಿಸಿದವರಾರೂ ಕಿಂಗ್ ಪಿನ್ ಗಳಲ್ಲ. ಇವರು ಕೇವಲ ಮಧ್ಯವರ್ತಿಗಳು. ಪ್ರಕರಣದ ಹಿಂದೆ ಪ್ರಭಾವಿ ಸಚಿವರ ಕೈವಾಡ ಇದ್ದೇ ಇದೆ. ಸರ್ಕಾರವೇ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದರು.
ಪಿಎಸ್ ಐ ಪರೀಕ್ಷೆ ಅಕ್ರಮದ ಹಿಂದೆ ಪ್ರಭಾವಿ ಸಚಿವರ ಹೆಸರು; 80 ಲಕ್ಷಕ್ಕೆ ಡೀಲ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ