Latest

ಗೋ ಹತ್ಯೆ ಆರೋಪದಲ್ಲಿ ಇಬ್ಬರು ಬುಡಕಟ್ಟು ಜನಾಂಗದವರ ಕೊಲೆ

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಗೋ ಹತ್ಯೆ ಮಾಡಿದ ಆರೋಪದಲ್ಲಿ ಇಬ್ಬರು ಬುಡಕಟ್ಟು ಜನಾಂಗದ ವ್ಯಕ್ತಿಗಳನ್ನು ಹೊಡೆದು ಸಾಯಿಸಿದ ದಾರುಣ ಘಟನೆ ಮಧ್ಯಪ್ರದೇಶದ ಸಿನೋಯ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಸಿನೋಯ್ ಜಿಲ್ಲೆಯ ಸಿಮಾರಿಯಾ ಎಂಬಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಗಳು ಮಾಂಸಕ್ಕಾಗಿ ಗೋ ಹತ್ಯೆ ನಡೆಸಿದ್ದಾರೆ ಎಂದು ಆರೋಪಿಸಿದ ಸುಮಾರು 20 ಜನರ ಗುಂಪು ದಾಳಿ ನಡೆಸಿದೆ. ಹಲ್ಲೆಯಲ್ಲಿ ಇಬ್ಬರು ಬುಡಕಟ್ಟು ಜನಾಂಗದ ವ್ಯಕ್ತಿಗಳು ಮೃತಪಟ್ಟಿದ್ದಾರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

Home add -Advt

ಕೌರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದೆ. ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಕೊಲೆ ಮಾಡಿದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಶಾಸಕ ಕಕೋಡಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

 

Related Articles

Back to top button