ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೋರ್ಜರಿ ಸಹಿ ಮಾಡಿ ಹಣ ಮಂಜೂರು ಮಾಡಲು ಯತ್ನಿಸಿದ್ದ ಆರೋಪದ ಮೇಲೆ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಐಪಿಸಿ ಸೆಕ್ಷನ್ 420, 506, 504, 509, 380, 465, 468, 417 ಅಡಿ ಕೇಸ್ ದಾಖಲಾಗಿದೆ. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ರವಿಕುಮಾರ್ ಎಸ್ಕೇಪ್ ಆಗಿದ್ದಾನೆ.
ಉದ್ಯಮಶೀಲತಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ವಿಜಯಪುರ, ಕಲಬುರ್ಗಿಯಿಂದ ಅರ್ಜಿ ಸಲ್ಲಿಕೆಯಾಗಿತ್ತು. ನಕಲಿ ಜಾತಿ ಪತ್ರ, ಅಂಕಪಟ್ಟಿ ಹಿನ್ನೆಲೆಯಲ್ಲಿ ಅರ್ಜಿಗಳು ತಿರಸ್ಕೃತಗೊಂಡಿದ್ದವು. ನಿಗಮದ ಎಂ.ಡಿ.ಲೀಲಾವತಿ, ಜಿ.ಎಂ.ನಾಗರಾಜಪ್ಪ ಸಹಿಯನ್ನು ರವಿಕುಮಾರ್ ಫೋರ್ಜರಿ ಮಾಡಿ ಸುಮಾರು 1.83 ಕೋಟಿ ಲಪಟಾಯಿಸಲು ಪ್ಲಾನ್ ಮಾಡಿದ್ದರು ಎನ್ನುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಎಸ್ಕೇಪ್ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ.
ಇಂದು ಚಿನ್ನ-ಬೆಳ್ಳಿ ದರ ಏನಾಗಿದೆ? ಗಮನಿಸಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ