
ಪ್ರಗತಿವಾಹಿನಿ ಸುದ್ದಿ; ಗೋಕಾಕ: ಪಿಎಸ್ ಐ ಹಗರಣದಲ್ಲಿ ರಾಜಕಾರಣಿಗಳ, ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದು ಈಗಾಗಲೇ ಕಂಡು ಬಂದಿದ್ದು, ಕಾರಣ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದ್ದಾರೆ.
ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು, ಸರ್ಕಾರ ಪೊಲೀಸರಿಂದಲೇ ತನಿಖೆ ನಡೆಸುವುದು ಎಷ್ಟರ ಮಟ್ಟಿಗೆ ಸೂಕ್ತವೆಂದು ಅವರು ಪ್ರಶ್ನಿಸಿದ್ದಾರೆ.
ಒಂದೇ ಕೇಂದ್ರದಲ್ಲಿ ಪರಿಕ್ಷೆ ಬರೆದ ಬಹಳ ಜನ ಪಿಎಸ್ ಐ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಈಗಾಗಲೇ ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಏಸಗಿರುವುದು ಕಂಡು ಬಂದಿದ್ದು, ಪ್ರಾಮಾಣಿಕ ತನಿಖೆ ನಡೆಸಿ ಅಕ್ರದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪಿಎಸೈ ಹಗರಣದಲ್ಲಿ ಉನ್ನತ ಹುದ್ದೆಯ ಅಧಿಕಾರಿಗಳು, ಮಂತ್ರಿಗಳು, ಶಾಸಕರ ಹೆಸರು ಕೇಳಿ ಬರುತ್ತಿದ್ದು, ನಿನ್ನೆ ಮಾಜಿ ಸಿಎಂ ಅವರ ಮಗನ ಹೆಸರು ಕೇಳಿ ಬಂದಿದೆ. ಆದ್ದರಿಂದ ಸೂಕ್ತ ತನಿಖೆ ನಡೆಸಬೇಕು ಎಂದ ಅವರು, ದಿವ್ಯಾ ಹಾಗರಗಿ ಅವರನ್ನು ಕಾಂಗ್ರೆಸ್ ನವರು ಮುಚ್ಚಿಡಲು ಅವರು ಸಣ್ಣ ಮಗು ಅಲ್ಲ. ಬಿಜೆಪಿ ಪಕ್ಷದಲ್ಲಿ ಉನ್ನತ ಹುದ್ದೆಯಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮೇ. 7,8ರಂದು ಬೆಳಗಾವಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ನಡೆವುವ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ನಾನು ಕೂಡ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ ಎಂದು ತಿಳಿಸಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೇ. 7ರಂದು ಮಧ್ಯಾಹ್ನ 3.00 ಗಂಟೆಗೆ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆ ಬಗ್ಗೆ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಮುಖಂಡರ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಶೀಘ್ರದಲ್ಲಿಯೇ ಒಳ್ಳೆಯ ಸುದ್ದಿ ಕೊಡ್ತೀವಿ ಎಂದ ರಮೇಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ