
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಗರಣದಲ್ಲಿ ಪೊಲೀಸ್ ಅಧಿಕಾರಿಗಳೇ ಪ್ರಮುಖವಾಗಿ ಬ್ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಾಥ್ ನೀಡಿದ್ದ ಆರೋಪದಲ್ಲಿ ಲಿಂಗಸಗೂರು ಡಿವೈಎಸ್ ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಸಿಪಿಐ ಆನಂದ್ ಬರೋಬ್ಬರಿ 2 ಕೋಟಿ ರೂಪಾಯಿ ಡೀಲ್ ಮಾಡಿದ್ದರು ಎಂದು ತಿಳಿದುಬಂದಿದೆ. ಒಟ್ಟಾರೆ ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ದೊಡ್ಡ ದೊಡ್ಡ ರಾಜಕಾರಣಗಳ ಸಂಬಂಧಿಕರು, ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವುದು ಕಂಡುಬರುತ್ತಿದೆ.
ಪಿಎಸ್ ಐ ಅಕ್ರಮ; ಮತ್ತೋರ್ವ ಕಾನ್ಸ್ ಟೇಬಲ್ ಅಮಾನತು