ಪ್ರಗತಿವಾಹಿನಿ ಸುದ್ದಿ; ಅಮರಾವತಿ; ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ವಿಶೇಷ ಮುಖ್ಯ ಕಾರ್ಯದರ್ಶಿ ಸೇರಿದಂತೆ ಮೂವರು ಐಎ ಎಸ್ ಅಧಿಕಾರಿಗಳಿಗೆ ಒಂದು ತಿಂಗಳು ಜೈಲುಶಿಕ್ಷೆ ಪ್ರಕಟವಾಗಿದೆ.
ಆಂಧ್ರಪ್ರದೇಶ ಹೈಕೋರ್ಟ್ ಈ ತೀರ್ಪು ನೀಡಿದ್ದು, ನ್ಯಾಯಾಲಯ ನಿಗದಿಪಡಿಸಿದ ಸಮಯದಲ್ಲಿ ಕೋರ್ಟ್ ಆದೇಶ ಜಾರಿಗೆ ವಿಫಲ ಹಾಗೂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಆರೋಪದಲ್ಲಿ ಮೂವರು ಐಎ ಎಸ್ ಅಧಿಕಾರಿಗಳಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ ಎರಡು ಸಾವಿರ ದಂಡ ವಿಧಿಸಿದೆ.
ಕೃಷಿ ಇಲಾಖೆ ವಿಶೇಷ ಮುಖ್ಯ ಕಾರ್ಯದರ್ಶಿ ಪೂನಮ್ ಮಲಕೊಂಡಯ್ಯ, ಕೃಷಿ ಇಲಾಖೆಯ ಹಿಂದಿನ ಆಯುಕ್ತ ಹೆಚ್ ಅರುಣ್ ಕುಮಾರ್ ಹಾಗೂ ಹಿಂದಿನ ಕರ್ನೂಲ್ ಜಿಲ್ಲಾಧಿಕಾರಿ ಜಿ.ವೀರಪಾಂದಯ್ಯ ಶಿಕ್ಷೆಗೆ ಒಳಗಾದ ಅಧಿಕಾರಿಗಳು.
2019ರ ಅಕ್ಟೋಬರ್ ನಲ್ಲಿ ಗ್ರಾಮ ಕೃಷಿ ಸಹಾಯಕರ ಹುದ್ದೆಗೆ ಅರ್ಜಿದಾರರ ಅಭ್ಯರ್ಥಿತನವನ್ನು ಪರಿಗಣಿಸುವಂತೆ ಸರ್ಕಾರಿ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿತ್ತು. ಆದರೆ ಹೈಕೋರ್ಟ್ ಆದೇಶ ಜಾರಿಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಅರ್ಜಿದಾರರು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿದ್ದರು. ಪ್ರಕರಣ ಸಂಬಂಧ ಇದೀಗ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಲಾಗಿದೆ.
ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ