Kannada NewsKarnataka NewsLatest

ಬೆಳಗಾವಿ: ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಿವುಡ ಮಕ್ಕಳ ಸರಕಾರಿ ಶಾಲೆಗೆ ಪದವಿಧರ ಸಹಾಯಕ ಅಂಶಕಾಲಿಕ ಗೌರವಧನ ಮಾಸಿಕ ಗರಿಷ್ಠ ೬ ಸಾವಿರದಂತೆ ಸಮಾಜ ವಿಜ್ಞಾನ, ಗಣಿತ ಹಾಗೂ ವಿಜ್ಞಾನ ವಿಷಯಗಳ ಭೋಧನೆ ಮಾಡಲು ಒಟ್ಟು  ೩ ಅಭ್ಯರ್ಥಿಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಬಾರದೆ ಇರುವದರಿಂದ, ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ ೧೮ ೨೦೨೨ರವರೆಗೆ ವಿಸ್ತರಿಸಲಾಗಿದೆ.

 

ಶ್ರವಣದೋಷವುಳ್ಳ ಮಕ್ಕಳಿಗೆ ಪಾಠ ಮಾಡಲು ವಿಶೇಷ ಶಿಕ್ಷಣ/ತರಬೇತಿ ಹೊಂದಿರುವವರಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು.

 

ಆಸಕ್ತ ಅಭ್ಯರ್ಥಿಗಳು ಮೇ ೧೮ರೊಳಗಾಗಿ ಅಧೀಕ್ಷಕರು ಕಿವುಡ ಮಕ್ಕಳ ಸರಕಾರಿ ಶಾಲೆ ಅಜಮ ನಗರ, ವಿದ್ಯಾಗಿರಿ ಬೆಳಗಾವಿ-೫೯೦೦೧೦ ಇವರಿಗೆ ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೧-೨೪೭೨೨೫೦ ಅಥವಾ ೮೫೪೮೦೫೫೨೩೯, ೯೪೪೯೪೪೨೨೧೨ ಸಂಪರ್ಕಿಸಬಹುದು ಎಂದು ಕಿವುಡ  ಮಕ್ಕಳ ಸರಕಾರಿ ಶಾಲೆಯ ಅಧೀಕ್ಷಕರಾದ ಡಿ.ಎನ್ ನಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button