Kannada NewsLatest

ಕೇದಾರನಾಥನ ಸನ್ನಿಧಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರಾರ್ಥಿಸಿದ್ದೇನು ಗೊತ್ತೇ?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉತ್ತರಾಖಂಡ ರಾಜ್ಯದ ಕೇದಾರಪೀಠದ (ಉಖಿಮಠ) ಪ್ರವಾಸ ಕೈಗೊಂಡಿದ್ದು, ಸೋಮವಾರ ಶ್ರೀ ರಾವಲ ಭೀಮಾಶಂಕರ ಶ್ರೀಗಳ ಆಶೀರ್ವಾದ ಪಡೆದರು.
 
ಶನಿವಾರ ಸಂಜೆ ಅವರು ಬೆಳಗಾವಿಯಿಂದ ಕೇದಾರನಾಥಕ್ಕೆ ಪ್ರಯಾಣ ಬೆಳೆಸಿದ್ದರು. ನೈಸರ್ಗಿಕವಾಗಿಯೇ ಅತ್ಯಂತ ಸುಂದರ ದೃಶ್ಯಗಳಿಂದ ಕೂಡಿರುವ ಈ ದೇವಾಲಯ ಪವಾಡ ಹಾಗೂ ಅನೇಕ ಪೌರಾಣಿಕ ಕಥೆಗಳನ್ನು ಒಳಗೊಂಡಿರುವುದು ವಿಶೇಷ. ಕೈಲಾಸ ಪರ್ವತದ ನಂತರ ಶಿವನ ಎರಡನೇ ವಾಸಸ್ಥಾನವೆಂದು ಕರೆಯಲ್ಪಡುವ  ಕೇದಾರನಾಥ ಸ್ವಾಮಿಯ ದರ್ಶನ, ಆಶೀರ್ವಾದ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ಪ್ರವಾಹ ಹಾಗೂ ಕೊರೋನಾಗಳಿಂದಾಗಿ ಕಳೆದ 2 ವರ್ಷದಿಂದ ಜನರು ತತ್ತರಿಸಿಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಇಂತಹ ಯಾವುದೇ ತೊಂದರೆಗಳು ಬಾರದೆ ಜನರು ನೆಮ್ಮದಿಯಿಂದ ಬಾಳುವಂತಾಗಲಿ ಎಂದು ದೇವರಲ್ಲಿ ಬೇಡಿಕೊಂಡೆ ಎಂದು ಅವರು ತಿಳಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button