ಪ್ರಗತಿವಾಹಿನಿ ಸುದ್ದಿ; ತುಮಕೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ.
ಬೆಂಗಳೂರು ನಗರದ ನಿವಾಸಿಗಳಾಗಿರುವ 27 ವರ್ಷದ ರಘು, 21 ವರ್ಷದ ಸಂತೋಷ್ ಮೃತರು. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರಲ್ಲಿ ವಿಜಯ್ ಎಂಬಾತನ ಸ್ಥಿತಿ ಗಂಭೀರವಾಗಿದೆ.
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಪುರಸಭೆ ಸದಸ್ಯನನ್ನು ಬಂಧಿಸಿದ ಸಿಐಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ