ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಸನಿ ಚಂಡಮಾರುತದ ಪರುಣಾಮ ರಾಜ್ಯದಲ್ಲಿಯೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚಂಡಮಾರುತದಿಂದಾಗಿ ಈಗಾಗಲೇ ಆಂಧ್ರಪ್ರದೇಶದ ವಿಶಾಖಪಟ್ಟಣ, ಓಡಿಶಾದ ಪುರಿ ಸೇರಿದಂತೆ ಹಲವೆಡೆಗಳಲ್ಲಿ ಬಿರುಗಾಳಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗವೈ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ-ಬೈಕ್ ನಡುವೆ ಅಪಘಾತ; ಇಬ್ಬರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ