ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಸಿಸ್ಟೆಂಟ್ ಪ್ರೊಫೇಸರ್ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಚಿವ ಅಶ್ವತ್ಥನಾರಾಯಣ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಎ.ಪಿ.ರಂಗನಾಥ್ ದೂರು ನೀಡಿದ್ದಾರೆ.
ಸಚಿವ ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಅಕ್ರಮದಲ್ಲಿ ಭಾಗಿಯಾಗಿರುವ ನಿರಂಜನ್, ಅಪ್ಪಾಜಿಗೌಡ ಸೇರಿದಂತೆ 6 ಜನರ ವಿರುದ್ಧ ದೂರು ನೀಡಲಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಎ.ಪಿ.ರಂಗನಾಥ್, ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ 30-40 ಲಕ್ಷ ಹಣ ಪಡೆದು ಓಎಂಆರ್ ಶೀಟ್ ತಿದ್ದುಪಡಿ ಮಾಡಿ ಆಯ್ಕೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ವೇಳೆ ತಿಳಿದುಬಂದಿದೆ. ಅಕ್ರಮದಲ್ಲಿ ಸ್ವತ: ಸಚಿವರು, ಐಎ ಎಸ್ ಅಧಿಕಾರಿಗಳು, ಮಾಜಿ ಕುಲಪತಿಗಳು ಸೇರಿದಂತೆ ಉನ್ನತ ಹುದ್ದೆಗಳಲ್ಲಿರುವವರು ಭಾಗಿಯಾಗಿದ್ದಾರೆ. ಕ್ರಮ ಕೈಗೊಳ್ಳುವಂತೆ ದೂರು ನೀಡಿದರೂ ಎಫ್ ಐ ಆರ್ ದಾಖಲಾಗದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈಗಲಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ನೆಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ