ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ.ರವೀಂದ್ರನಾಥ್ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ ರವೀಂದ್ರನಾಥ್ ಅವರನ್ನು ಸರ್ಕಾರ ಇತ್ತೀಚೆಗೆ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿತ್ತು.
ಸರ್ಕಾರದ ವರ್ಗಾವಣೆ ಕ್ರಮಕ್ಕೆ ಬೇಸರ ವ್ಯಕ್ತಪಡಿಸುರುವ ರವೀಂದರನಾಥ್, ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ನಾನು ಹೋರಾಟ ನಡೆಸಿದ್ದೆ. ಹೋರಾಟ ನಡೆಸುತ್ತಿರುವ ನಡುವೆಯೇ ಸರ್ಕಾರ ನನ್ನನ್ನು ವರ್ಗಾವಣೆ ಮಾಡಿರುವುದು ಬೇಸರ ತಂದಿದೆ. ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರಿಗೆ ನೋಟೀಸ್ ನೀಡಿದ್ದೆ. ವಕೀಲರ ಮೂಲಕ ಅವರು 10 ದಿನ ಕಾಲಾವಕಾಶ ಕೇಳಿದ್ದರು. ಈ ಮಧ್ಯೆ ರಾಜ್ಯ ಸರ್ಕಾರ ನನ್ನ ವರ್ಗಾವಣೆ ಮಾಡಿದ್ದು, ನನ್ನ ವರ್ಗಾವಣೆ ಹಿಂದೆ ಈ ಪ್ರಕರಣದ ಪಾತ್ರ ಇದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ 1995ರಿಂದಲೇ ರಾಜ್ಯದಲ್ಲಿ ಎಸ್ಸಿ, ಎಸ್ಟಿ ಕಾಯ್ದೆ ಜಾರಿಯಲ್ಲಿದೆ. ಪೊಲೀಸ್ ಇಲಾಖೆಯಲ್ಲಿಯೂ ಕಾಯ್ದೆ ಜಾರಿಗೆ ಮನವಿ ಮಾಡಿದ್ದೆ. ಪದೇ ಪದೆ ಕೇಳಿದರೂ ಸರ್ಕಾರದ ನಿರ್ಲಕ್ಷತನ ಬೇಸರ ತಂದಿತ್ತು. ಈಗ ಅವಧಿ ಪೂರ್ವವೇ ವರ್ಗಾವಣೆ ಮಾಡಿರುವುದು ಬೇಸರವಾಗಿದೆ ಹಾಗಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
ಬೆಳ್ಳಿ ಗೆಜ್ಜೆಗಾಗಿ 4 ವರ್ಷದ ಬಾಲಕಿಯನ್ನೇ ಹತ್ಯೆ ಮಾಡಿದ ಮಹಿಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ