ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾಂಗ್ರೆಸ್ ಮುಖಂಡನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲದ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ಎಂಬುವವರನ್ನು ಸಿಐಡಿ ವಶಕ್ಕೆ ಪಡೆದಿದೆ. ಶ್ರವಣಬೆಳಗೊಳ ಪಿಎಸ್ ಐ ಪರವಾಗಿ ಅಕ್ರಮವೆಸಗಿರುವ ಆರೋಪ ಶರತ್ ಮೇಲಿದೆ.
ಅಲ್ಲದೇ ಪಿಎಸ್ ಐ ಹುದ್ದೆ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶರತ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ವೈ.ಎಸ್.ವಿ.ದತ್ತಾ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ