Latest

ನೀವು ತೊಂದರೆ ತೆಗೆದುಕೊಳ್ಳಬೇಡಿ; ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದ ನಟಿ ರಮ್ಯಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಭೇಟಿ ವಿಚಾರವಾಗಿ ಆರಂಭವಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದೆ, ನಟಿ ರಮ್ಯಾ ಟ್ವೀಟ್ ವಾರ್ ಸ್ವಪಕ್ಷದ ನಾಯಕರ ನಡುವಿನ ವಾಗ್ವಾದಕ್ಕೆ ಕಾರಣವಾಗಿದೆ.

ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಭೇಟಿಯಾಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ನಟಿ ರಮ್ಯಾ, ರಾಜಕೀಯ ಪಕ್ಷದವರು ಪಕ್ಷಾತೀತವಾಗಿ ಭೇಟಿಯಾಗುತ್ತಾರೆ. ಕಾರ್ಯಕ್ರಮಗಳಿಗೂ ಹೋಗುತ್ತಾರೆ. ಸಂಬಂಧಿಗಳು ಸಹ ಆಗಿದ್ದಾರೆ. ಇದಕ್ಕೆ ಡಿ.ಕೆ.ಶಿವಕುಮಾರ್ ಅವರ ಸ್ವಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ಅಚ್ಚರಿ ತಂದಿದೆ ಎಂದಿದ್ದರು.

ಎಂ.ಬಿ.ಪಾಟೀಲ್ ನಿಷ್ಠಾವಂತ ಕಾಂಗ್ರೆಸ್ ಮುಖಂಡ. ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಲ್ಲವೇ ಎಂದು ಸಲಹೆ ನೀಡಿದ್ದರು. ರಮ್ಯಾ ಅವರ ಈ ಟ್ವೀಟ್ ಗೆ ಕೆಪಿಸಿಸಿ ಕಚೇರಿಯಿಂದಲೇ ರಮ್ಯಾ ವಿರುದ್ಧ ಟ್ರೋಲ್ ಮಾಡುವಂತೆ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಟ್ರೋಲ್ ಮಾಡುವ ತೊಂದರೆ ನೀವು ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಮ್ಯಾ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ಕೆಪಿಸಿಸಿ ಕಚೇರಿಯಿಂದ ಟ್ರೋಲ್ ಮಾಡುತ್ತಿರುವ ಬಗ್ಗೆ ಸರಣಿ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾರೆ.

ಇದೀಗ ರಮ್ಯಾ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಯಾರ್ಯಾರಿಗೆ ಏನು ನೋವಿದೆಯೋ? ಏನು ದುಗುಡವಿದೆಯೋ ಗೊತ್ತಿಲ್ಲ. ಕೆಪಿಸಿಸಿ ಕಚೇರಿಯಿಂದ ರಮ್ಯಾ ವಿರುದ್ಧ ಟ್ರೋಲ್ ಗೆ ಸಂದೇಶ ನೀಡಿಲ್ಲ. ರಮ್ಯಾ ಹಾಗೂ ಎಂ.ಬಿ.ಪಾಟೀಲ್ ಇಬ್ಬರೂ ನಮ್ಮ ಪಕ್ಷದವರೇ. ಎಲ್ಲಿ ಮಿಸ್ ಫೈರ್ ಆಗಿದೆ ಎಂಬುದನ್ನು ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ.

ಪುಟ್ಟ ಮಕ್ಕಳಲ್ಲಿ ಕಂಡು ಬರುತ್ತಿದೆ ಟೊಮೆಟೊ ಜ್ವರ…!

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button