ಕಾರ್ಯಕ್ರಮ ಉದ್ಘಾಟನೆ ವೇಳೆ ಮುರಿದು ಬಿದ್ದ ಲೈಟಿಂಗ್ ಟ್ರೆಸ್; ಸಂಸದ ಈರಣ್ಣ ಕಡಾಡಿ ಸ್ವಲ್ಪದರಲ್ಲಿ ಪಾರು
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚೂನಮ್ಮ ದೇವಿ ಜಾತ್ರೆ ಅಂಗವಾಗಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದ ಉದ್ಘಾಟನೆ ವೇಳೆ ಲೈಟಿಂಗ್ ಟ್ರೆಸ್ ಮುರಿದು ಬಿದ್ದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಅದೃಷ್ಟವಶಾತ್ ಸಂಸದ ಈರಣ್ಣ ಕಡಾಡಿ ಸ್ವಲ್ಪದರಲ್ಲಿ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕಾರ್ಯಕ್ರಮ ಉದ್ಘಾಟನೆ ವೇಳೆ ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆಯೇ ಮುರಿದು ಬಿದ್ದಿದೆ. ಹಲವರು ಗಾಯಗೊಂಡಿದ್ದಾರೆ. ನಾವು ಸ್ವಲ್ಪದರಲ್ಲಿ ಬಚಾವ್ ಆಗಿದ್ದೇವೆ ಎಂದಿದ್ದಾರೆ.
ಜಮೀನಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸ್ವಲ್ಪ ಆಯತಪ್ಪಿದರೂ ವೇದಿಕೆಯಲ್ಲಿದ್ದ ಗಣ್ಯರ ಪ್ರಾಣವೇ ಹೋಗುತ್ತಿತ್ತು. ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶಿರ್ವಾದದಿಂದ ಪಾರಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಳೆ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ