Latest

ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸ್ವಾಮೀಜಿಯಂತೆ ವೇಷ ಧರಿಸಿ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಆರೋಪಿ ನಾಗೇಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

ಏ.28ರಂದು ಬೆಂಗಳೂರಿನ ಸುಂಕದಕಟ್ಟೆ ಬಳಿ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಇದೀಗ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸಿಕ್ಕಿಬಿದ್ದಿದ್ದಾನೆ.

Home add -Advt

ಆರೋಪಿ ನಾಗೇಶ್ ತಿರುವಣ್ಣಾಮಲೈನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆಮರೆಸಿಕೊಂಡಿದ್ದ. ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಪಾರದರ್ಶಕ ಬಟ್ಟೆ ಧರಿಸಿ ಮುಜುಗರಕ್ಕೀಡಾದ ಬಹುಭಾಷಾ ನಟಿ

Related Articles

Back to top button