Latest

ಆಸಿಡ್ ದಾಳಿ ಆರೋಪಿ ಮೇಲೆ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೂತ್ರ ವಿಸರ್ಜನೆ ಮಾಡುವಾಗ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ನಾಗೇಶ್ ಮೇಲೆ ಗುಂಡಿನ ದಾಳಿ ನಡೆಸಿ ಮತ್ತೆ ಬಂಧಿಸಿದ್ದಾರೆ.

ಆರೋಪಿ ನಾಗೇಶ್ ನನ್ನು ಬೆಂಗಳೂರಿಗೆ ಕರೆ ತರುತ್ತಿದ್ದಾಗ ನೈಸ್ ರಸ್ತೆ ಬಳಿ ಮೂತ್ರವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಹೇಳಿದ್ದಾನೆ. ಪೊಲೀಸರು ವಾಹನ ನಿಲ್ಲಿಸುತ್ತಿದಂತೆ ನಾಗೇಶ್ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾನೆ.

Home add -Advt

ಈ ವೇಳೆ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡುಹೊಡೆದು ತಪ್ಪಿಸಿಕೊಳ್ಳದಂತೆ ಎಚ್ಚರಿಸಿದ್ದಾರೆ.

ಆದರೂ ಓಡಲು ಯತ್ನಿಸಿದ ನಾಗೇಶ್ ಕಾಲಿಗೆ ಕಾಮಾಕ್ಷಿಪಾಳ್ಯ ಠಾಣೆ ಇನ್ಸ್ ಪೆಕ್ಟರ್ ಪ್ರಶಾಂತ್ ಗುಂಡು ಹಾರಿಸಿದ್ದಾರೆ. ಗಾಯಾಳು ನಾಗೇಶ್ ನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಹಾರೂಗೇರಿ: ಹೆಂಡತಿ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನೇಣಿಗೆ ಶರಣು

Related Articles

Back to top button