Latest

ರಾಜ್ಯಸಭೆ ಚುನಾವಣೆ; ನಿರ್ಮಲಾ ಸೀತಾರಾಮನ್ ಸೇರಿ ಐವರ ಹೆಸರು ಶಿಫಾರಸು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ.

ರಾಜ್ಯಸಭೆಯ ಎರಡು ಸ್ಥಾನಗಳಿಗೆ ಒಟ್ಟು ಐವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದು ಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮಗೊಂಡಿದೆ.

Home add -Advt

ಇನ್ನೊಂದು ಸ್ಥಾನಕ್ಕೆ ಕೆ.ಸಿ.ರಾಮಮೂರ್ತಿ, ನಿರ್ಮಲ್ ಕುಮಾರ್ ಸುರಾನಾ, ಲಹರಿ ವೇಲು ಹಾಗೂ ಪ್ರಕಾಶ್ ಶೆಟ್ಟಿ ಹೆಸರು ಶಿಫಾರಸು ಮಾಡಲಾಗಿದೆ.

ರಾಜ್ಯಸಭೆಗೆ ಜೂನ್ 10ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ.
ಪರಿಷತ್ ಗೆ ಬಿ.ವೈ.ವಿಜಯೇಂದ್ರ ಸೇರಿ ನಾಲ್ವರ ಹೆಸರು ಶಿಫಾರಸು

Related Articles

Back to top button