ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ಕೇರಳದಲ್ಲಿ ವರುಣನ ಆರ್ಭಟ ಹೆಚ್ಚಲಿರುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೇರಳದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸುವಂತೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಂಗಾರು ಆರಂಭಕ್ಕೂ ಮೊದಲೇ ಕೇರಳದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಡುಕ್ಕಿ, ಎರ್ನಾಕುಲಂ, ಮಲಪ್ಪುರಂ, ಕೋಜಿಕ್ಕೋಡ್, ವಯನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಐದೂ ಜಿಲ್ಲೆಗಳಿಗೆ ಎನ್ ಡಿ ಆರ್ ಎಫ್ ತಂಡ ರವಾನಿಸಲಾಗಿದೆ.
ನದಿತೀರದ ಜನರು ಜಾಗೃತವಹಿಸಬೇಕು. ಅಲ್ಲದೇ ಅಲ್ಲಲ್ಲಿ ಭೂ ಕುಸಿತವಾಗುವ ಸಂಭವವಿದ್ದು, ಗುಡ್ಡಗಾಡು ಪ್ರದೇಶದ ಜನರು ಮುಂಜಾಗೃತೆವಹಿಸುವಂತೆ ಸಂದೇಶ ರವಾನಿಸಲಾಗಿದೆ.
ಚಾರ್ ಧಾಮ್ ಯಾತ್ರೆಗೆ ತೆರಳಿದ್ದ 39 ಯಾತ್ರಿಕರು ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ