ನ್ಯಾಯ ಕೊಡಿಸದಿದ್ದರೆ ಉಗ್ರರ ಜತೆ ಕೈಜೊಡಿಸುತ್ತೇವೆ; ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್ ಐ ಅಭ್ಯರ್ಥಿಗಳು
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣದಿಂದ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ನ್ಯಾಯ ಕೊಡಿಸದಿದ್ದರೆ ಉಗ್ರರೊಂದಿಗೆ ಕೈಜೋಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಕ್ತದಲ್ಲಿ 2 ಪುಟಗಳ ಪತ್ರ ಬರೆದಿರುವ ಅಭ್ಯರ್ಥಿಗಳು ನೇಮಕಾತಿಯಲ್ಲಿ ಮೋಸ ಹೋದವರಿಗೆ ನ್ಯಾಯ ಕೊಡಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇರುವವರಿಗೆ ಮಾತ್ರ ಎಂಬ ಸ್ಥಿತಿ ಬಂದಿದೆ. ಸರ್ಕಾರ ಈ ವುಅವಸ್ಥೆಯಿಂದಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದೇವೆ. ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ.
ನಾವು ಎಂಟು ಜನರಿದ್ದೇವೆ. ನಮಗೆ ನ್ಯಾಯ ಕೊಡಿಸದಿದ್ದರೆ ನಾವೆಲ್ಲರೂ ಉಗ್ರರು, ನಕ್ಸಲ್ ಸಂಘಟನೆ ಸೇರುತ್ತೇವೆ. ಅವರಿಂದ ಹಣ ಪಡೆದು ಬಡ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಎಂದು ನೊಂದ ಪಿಎಸ್ ಐ ಅಭ್ಯರ್ಥಿಗಳು ಪತ್ರದಲ್ಲಿ ಬರೆದಿದ್ದಾರೆ.
ಭಾರಿ ಮಳೆ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ