Latest

ಭಾರಿ ಮಳೆ ಮುನ್ಸೂಚನೆ; ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊಂಚ ಕಡಿಮೆಯಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಇಂದಿನಿಂದ ರಾಜ್ಯಾದ್ಯಂತ ನಾಲ್ಕುದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 18ರಂದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ ತಿಂಗಳಲ್ಲಿ ಈ ವರ್ಷ ರಾಜ್ಯದಲ್ಲಿ ಮೊದಲ ರೆಡ್ ಅಲರ್ಟ್ ಇದಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಮಳೆ ಸಂಬಂಧಿತ ಅಪಾಯ ಸನ್ನಿವೇಶ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Home add -Advt

ಕರ್ನಾಟಕ ಮಾತ್ರವಲ್ಲ ತಮಿಳುನಾಡು, ಕೇರಳದಲ್ಲಿಯೂ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮೂರು ರಾಜ್ಯಗಳಲ್ಲೂ ನಾಲ್ಕುದಿನಗಳ ಕಾಲ ವರುಣನ ಆರ್ಭಟ ಹೆಚ್ಚಲಿದೆ. ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button