Latest

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥರಾವ್ ಮಲ್ಕಾಪುರೆ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ಹಿನ್ನೆಲೆಯಲ್ಲಿ ಹಂಗಾಮಿ ಸಭಾಪತಿಯಾಗಿ ರಘುನಾಥರಾವ್ ಮಲ್ಕಾಪುರೆ ಅಧಿಕಾರ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ರಘುನಾಥ್ ಮಲ್ಕಾಪುರೆ, ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಹಂಗಾಮಿ ಸಭಾಪತಿಯಾಗಿ ನೇಮಕಗೊಂಡಿದ್ದೇನೆ. ರಾಜ್ಯಪಾಲರ ಸೂಚನೆ ಮೇರೆಗೆ ಅಧಿಕಾರ ವಹಿಸಿಕೊಂಡಿರುವುದಾಗಿ ತಿಳಿಸಿದರು.

Home add -Advt

ಇದೇ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಹೇಳಿದರು.

ಭಗತ್ ಸಿಂಗ್ ಪಾಠಕ್ಕೆ ಕೊಕ್ ಕೊಟ್ಟು ಆರ್ ಎಸ್ ಎಸ್ ನ ಹೆಡ್ಗೆವಾರ್ ಸೇರ್ಪಡೆ; ಪಠ್ಯಪುಸ್ತಕವನ್ನು ಪಕ್ಷ ಪುಸ್ತಕ ಮಾಡಲು ಹೊರಟ ಬಿಜೆಪಿ

Related Articles

Back to top button