Kannada NewsLatest

ಸಬೂಬು ಹೇಳದೇ ಸಮಸ್ಯೆ ಪರಿಹರಿಸಿ; ತಾಲೂಕು ಅಧಿಕಾರಿಗಳಿಗೆ ಡಿಸಿ ಖಡಕ್ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತಾಲ್ಲೂಕುಮಟ್ಟದ ಅಧಿಕಾರಿಗಳು ಪ್ರತಿದಿನ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಸಮಯ ಮೀಸಲಿಡಬೇಕು. ತಮ್ಮ ವ್ಯಾಪ್ತಿಯ ಕಚೇರಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ಜನರ ದೂರುಗಳನ್ನು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ನೇ 17) ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕು ಮಟ್ಟದಲ್ಲಿ ಜನರ ದೂರುಗಳಿಗೆ ಸ್ಪಂದಿಸದಿದ್ದರೆ ಜಿಲ್ಲಾ ಮಟ್ಟಕ್ಜೆ ದೂರುಗಳು ಬರುತ್ತವೆ. ಆದ್ದರಿಂದ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು.
ಯಾವುದೇ ಕೆಲಸ ಬಾಕಿ ಉಳಿಯದಂತೆ ನಿಯಮಿತವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು.
ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ ನಿರ್ವಹಣೆಗೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.

ತಾಂತ್ರಿಕ ದೋಷದ ಸಬೂಬು ಬೇಡ:

ತಾಂತ್ರಿಕ ದೋಷಗಳನ್ನು ಸಬೂಬು ಹೇಳದೇ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕವಾಗಿ ಸಕಾರಾತ್ಮಕವಾಗಿ ಪ್ರಯತ್ನಿಸಬೇಕು. ಸ್ಥಳೀಯವಾಗಿ ಸಮಸ್ಯೆ ಪರಿಹರಿಸಿದರೆ ಸರಕಾರ ಹಾಗೂ ಅಧಿಕಾರಿಗಳಿಗೂ ಉತ್ತಮ ಹೆಸರು ಬರುತ್ತದೆ. ಆದ್ದರಿಂದ ಈ ನಿಟ್ಟಿಯ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಚಿಕ್ಕೋಡಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಡಿಸಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button