ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ದೆಹಲಿ ಎನ್ ಐ ಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
2017ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಉಗ್ರರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ್ದಾಗಿ ಯಾಸಿನ್ ಮಲಿಕ್ ಕೋರ್ಟ್ ಎದುರು ತಪ್ಪೊಪ್ಪಿಕೊಂಡಿದ್ದ. 2019ರಿಂದ ದೆಹಲಿಯ ತಿಹಾಸ್ ಜೈಲಿನಲ್ಲಿರುವ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ, 18 ( ಭಯೋತ್ಪಾದನಾ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದನಾ ಗುಂಪು ಅಥವಾ ಸಂಘಟನೆಯ ಸದಸ್ಯ) ಭಾರತೀಯ ದಂಡಸಂಹಿತೆಯ ಸೆಕ್ಷನ್ 120-B (ಅಪರಾಧ ಸಂಚು) ಮತ್ತು 124-A (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಇದೀಗ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿದ ಪ್ರಕರಣದಲ್ಲಿ ಯಾಸಿನ್ ಮಲಿಕ್ ವಿರಿದ್ಧದ ಆರೋಪ ಸಾಬೀತಾಗಿದ್ದು, ಆತ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ಮೇ 25ರಂದು ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿದೆ.
ನವಜ್ಯೋತ್ ಸಿಂಗ್ ಸಿಧುಗೆ ಜೈಲು ಶಿಕ್ಷೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ