ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆ: ಕೆಲವು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿಯುತ್ತಿದೆ.
ಬುಧವಾರ ರಾತ್ರಿಯೇ ಕೆಲವೆಡೆ ಮಳೆ ಆರಂಭವಾದರೆ, ಇನ್ನು ಕೆಲವೆಡೆ ಗುರುವಾರ ಆರಂಭವಾಗಿದೆ. ಗುರುವಾರ ರಾತ್ರಿ, ಶುಕ್ರವಾರ ಬೆಳಗಿನವರೆಗೂ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಬೆಳಗಾವಿ ನಗರ ಮತ್ತು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ರಾತ್ರಿಯಿಡೀ ಸ್ವಲ್ಪವೂ ತಡೆಯಿಲ್ಲದೆ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಮೈಸೂರು, ಉಡುಪಿ, ದಾವಣಗೆರೆ, ಬೆಂಗಳೂರು, ಬಳ್ಳಾರಿ, ಗದಗ, ಹಾವೇರಿ, ರಾಯಚೂರು, ಬಾಗಲಕೋಟೆ ಮೊದಲಾದ ಜಿಲ್ಲೆಗಳಲ್ಲೂ ನಿರಂತರ ಮಳೆಯಾಗುತ್ತಿದೆ.
ಮುಂಗಾರು ಆರಂಭವಾದ ವಾತಾವರಣ ನಿರ್ಮಾಣವಾಗಿದ್ದರೂ ಇದು ಚಂಡ ಮಾರುತದ ಪರಿಣಾಮವಾಗಿ ಸುರಿಯುತ್ತಿರುವ ಮಳೆಯಾಗಿದೆ. ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರವೂ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿಯುವ ಸೂಚನೆ ಇದೆ. ಕರ್ನಾಟಕದಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಗುರುವಾರ ಅನೇಕ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರವೂ ರಜೆ ವಿಸ್ತರಿಸಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ರಜೆ ಘೋಷಿಸುವ ಸಾಧ್ಯತೆ ಇದೆ.
ಭಾರಿ ಮಳೆ ; ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ