Latest

ದ್ವಿತೀಯ ಪಿಯು ಫಲಿತಾಂಶ ಜೂನ್ 3ನೇ ವಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿನ್ನೆಯಷ್ಟೇ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಇದೀಗ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗಲಿದೆ. ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

ಏಪ್ರಿಲ್ 22ರಿಂದ ಮೇ 18ರವರೆಗೆ ರಾಜ್ಯದ 1,076 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಇದೀಗ ಮೌಲ್ಯಮಾಪನ ಆರಂಭವಾಗಿದ್ದು, ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಹಿಳೆಯನ್ನು ಬ್ಲ್ಯಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ

Related Articles

Back to top button