ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಡೆಸಿರುವ ಚಿಂತನ ಶಿಬಿರದ ಬಗ್ಗೆ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ ಒಂದು ಮನೆಯಿಂದ ಒಬ್ಬರಿಗೆ ಟಿಕೆಟ್ ಎಂಬುದು ಕಾಂಗ್ರೆಸ್ ಪಕ್ಷದ ಹೊಸ ನಾಟಕ. ನಕಲಿ ಗಾಂಧಿ ಕುಟುಂಬಿಕರಿಗೆ ಮತ್ತು ಅವರ ಪಾದ ಪೂಜಕರಿಗೆ ಅನ್ವಯವಾಗುವುದಿಲ್ಲ ಎಂಬ ಷರತ್ತು ಅಳವಡಿಸಿರುವುದು ಅವರ ಬೂಟಾಟಿಕೆಗೆ ಸಾಕ್ಷಿ. 70 ಮೇಲ್ಪಟ್ಟವರಿಗೆ ಟಿಕೆಟ್ ನೀಡದ ಹೊಸ ನಿಯಮವೂ ಇವರಾರಿಗೂ ಅನ್ವಯವಾಗದು! ಎಂದು ಕಿಡಿಕಾರಿದೆ.
ರಾಜಸ್ಥಾನದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು? ಎಂದು ಪ್ರಶ್ನಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ? ಎಂದು ಪ್ರಶ್ನಿಸಿದೆ.
ವಯೋನಿವೃತ್ತಿಯ ಬಗ್ಗೆ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಪ್ರಸ್ತಾಪವಾಗಿದೆ. ಆದರೆ ಯಾವಾಗ? 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ “ಯಯಾತಿ”ಗಳ ಮೋಹ ಕಳಚುವುದೇ? ಎಂದು ಸರಣಿ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಘಟಕ ಕೇಳಿದೆ.
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+, ಚಿಂತನಾ ಶಿಬಿರದಲ್ಲಿ 50% ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ. ಈ ನಿಯಮವನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದಲ್ಲಿ ಕಾಂಗ್ರೆಸ್ 60+ ನಿಂದ 30+ ಗೆ ಇಳಿಯುವುದು ನಿಶ್ಚಿತ! ಎಂದು ಟೀಕಿಸಿದೆ.
ಪಿಎಸ್ ಐ ಅಕ್ರಮ; ವಿಶೇಷ ಕೋರ್ಟ್ ಸ್ಥಾಪನೆಗೆ ಚಿಂತನೆ ಎಂದ ಗೃಹ ಸಚಿವರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ