ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್. ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರಿ ಇಳಿಕೆ ಮಾಡಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದೆ. ಈ ಮೂಲಕ ದೇಶದಲ್ಲಿ ಪೆಟ್ರೋಲ್ ಡೀಸೆಲ್ ದರ ಇಳಿಕೆಯಾಗಿದ್ದು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 8 ರೂಪಾಯಿ ಇಳಿಕೆ ಮಾಡಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 6 ರೂಪಾಯಿ ಇಳಿಕೆ ಮಾಡಲಾಗಿದೆ. ಅಬಕಾರಿ ಸುಂಕ ಇಳಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್ ದರ 9.5 ರೂ ಹಾಗೂ ಡೀಸೆಲ್ ದರ 7 ರೂ ಕಡಿಮೆಯಾಗಲಿದೆ.
ಪೆಟ್ರೋಲ್, ಡೀಸೆಲ್ ದರ ಇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡಿದ್ದು, ಈ ದರ ಇಳಿಕೆ ವಿವಿಧ ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಜನರ ಜೀವನವೂ ಸುಲಭವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ