ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಧಾರವಾಡದ ಬಾಡ ಗ್ರಾಮದ ಬಳಿ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದರು. ಮೃತ ಕುಟುಂಬಗಳಿಗೆ ಕೇಂದ್ರ ಸಚಿವರಾದ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿ ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಮನ್ಸೂರು ಗ್ರಾಮದಿಂದ ಬೆನಕಟ್ಟಿಗೆ ತೆರಳುತ್ತಿದ್ದಾಗ ಕ್ರೂಸರ್ ವಾಹನ ನಿನ್ನೆ ಬೆಳಗಿನ ಜಾರ 2 ಗಂಟೆ ಸುಮಾರಿಗೆ ಮರಕ್ಕೆ ಡಿಕ್ಕಿಹೊಡೆದು 9 ಜನರು ಸಾವನ್ನಪ್ಪಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಳೆ ಹಾನಿ ನಿರ್ವಹಣೆಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದ ಸಿಎಂ; ಇಲ್ಲಿದೆ ವಲಯವಾರು ಸಚಿವರ ಪಟ್ಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ