ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಅಡಿಯಲ್ಲಿ ಸ್ಮಾರ್ಟ್ ಕ್ಲಾಸ್ ಟೆಂಡರ್ ನಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.
ಸ್ಮಾರ್ಟ್ ಸಿಟಿ ಟೆಂಡರ್ ನಲ್ಲಿ ಅವ್ಯವಹಾರದ ಅನುಮಾನ ಇದ್ದು, ಇದನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಆರ್ ಅಭಿಲಾಷ್ ಅವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಗಿದ್ದು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಭಿಲಾಷ್, ಭ್ರಷ್ಟಾಚಾರದ ಪೂರಕ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.
ಶಾಲಾ ಪಠ್ಯ ವಿವಾದ ಬೆನ್ನಲ್ಲೇ ಪಿಯು ಪಠ್ಯ ಪರಿಷ್ಕರಣೆಗೆ ಚಾಲನೆ ನೀಡಿದ ಶಿಕ್ಷಣ ಇಲಾಖೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ