ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.
ರಾಮನಗರ ಜಿಲ್ಲಾ ನ್ಯಾಯಾಲಯ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಸಮನ್ಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪಾದಯಾತ್ರೆ ವೇಳೆ ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ 40ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಮನಗರ ಕೋರ್ಟ್ ಸಿದ್ದರಾಮಯ್ಯಗೆ ಸಮನ್ಸ್ ಜಾರಿ ಮಾಡಿದೆ.
ಬೆಳಗಾವಿ: ಸ್ಮಾರ್ಟ್ ಸಿಟಿ ಪ್ರಾಜಕ್ಟ್ ನಲ್ಲಿ ಅವ್ಯವಹಾರ : ಆರೊಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ