ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆಯಾದರೂ ಇಂದು ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಇಂದು ಕರ್ನಾಟಕದ ಕರಾವಳಿಯ ಭಾಗದಲ್ಲಿ ಮಳೆಯಾಗಲಿದೆ.
ಇನ್ನು ಮುಂದಿನ 24 ಗಂಟೆಯಲ್ಲಿ ಕೇರಳ, ಮೆಘಾಲಯ, ತ್ರಿಪುರಾ ರಾಜ್ಯಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ.
ಹುಬ್ಬಳ್ಳಿ ಬಳಿ ಭೀಕರ ಅಪಘಾತ: 8 ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ