ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕೊನೆ ಹಂತದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಪುತ್ರ ಬಿ.ವೈ.ವಿಜಯೇಂದ್ರ ಹೆಸರನ್ನು ಕೈಬಿಡಲಾಗಿದೆ.
ಈ ಮೂಲಕ ಎಂಎಲ್ ಸಿ ಸ್ಥಾನದ ನಿರೀಕ್ಷೆಯಲ್ಲಿದ್ದ ವಿಜಯೇಂದ್ರಗೆ ಶಾಕ್ ಆಗಿದೆ. ಕುಟುಂಬ ರಾಜಕಾರಣಕ್ಕೆ ಮನ್ನಣೆ ಇಲ್ಲ ಎಂಬುದನ್ನು ಬಿಜೆಪಿ ಹೈಕಮಾಂಡ್ ಸ್ಪಷ್ಟವಾಗಿ ಸಂದೇಶ ರವಾನಿಸಿದೆ.
ಲಕ್ಷ್ಮಣ ಸವದಿ, ಮಹಿಳಾ ಕೋಟಾದಡಿ ಹೇಮಲತಾ ನಾಯಕ್, ದಲಿತ ಕೋಟಾದಲ್ಲಿ ಎಸ್ ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಒಬಿಸಿ ಕೋಟಾದಡಿ ಕೇಶವ ಪ್ರಸಾದ್ ಅವರಿಗೆ ಪರಿಷತ್ ಟಿಕೆಟ್ ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ