ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಎಲ್ ಸಿ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ವೈ.ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೆಟ್ ಕೈತಪ್ಪಿರುವುದು ಅವರ ಬೆಂಬಲಿಗರು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾರ್ಯಕರ್ತರಲ್ಲಿ ಹಾಗೂ ಬೆಂಬಲಿಗರಲ್ಲಿ ವಿಜಯೇಂದ್ರ ಸಹನೆಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.
ಅನಗತ್ಯ ಟೀಕೆ, ಟಿಪ್ಪಣಿಯಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ. ರಾಜಕೀಯ ನಿಂತ ನೀರಲ್ಲ, ಅದು ಹರಿಯುವ ನದಿಯ ಹಾಗೆ ಎಂಬುದನ್ನು ಕಾರ್ಯಕರ್ತರು, ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಆಕ್ರೋಶದಿಂದ ಪೂಜ್ಯ ತಂದೆಯವರ ಭಾವನೆಗಳಿಗೆ ಮಸಿ ಬಳಿದಂತಾಗುತ್ತದೆ. ನಮ್ಮನ್ನು ಬೆಂಬಲಿಸಿದಂತೆ ಆಗಲ್ಲ ಎಂಬುದನ್ನು ಹಿತೈಷಿಗಳು ಎಂದು ಹೇಳಿಕೊಳ್ಳುವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.
ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಬಿಜೆಪಿ ಎಂದಿಗೂ ಕೈಬಿಟ್ಟಿಲ್ಲ, ಬಿಡುವುದೂ ಇಲ್ಲ ಎಂಬ ನಂಬಿಕೆಯಿದೆ. ಎಲ್ಲರೂ ಸಹನೆ, ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪರಿಷತ್ತಿಗೆ ಲಕ್ಷ್ಮಣ ಸವದಿ; ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಹೊರಟ್ಟಿ
ನಾಪತ್ತೆಯಾಗಿದ್ದ ಖ್ಯಾತ ಗಾಯಕಿ ಶವವಾಗಿ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ