ಪ್ರಗತಿವಾಹಿನಿ ಸುದ್ದಿ; ದಾವೋಸ್: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿ ಇ ಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಜೂನ್ ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು.
ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು .
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ