
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಚೆನ್ನಮ್ಮ ವೃತ್ತದಲ್ಲಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗೂಡ್ಸ್ ವಾಹನ ಬ್ರೇಕ್ ಫೇಲ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಹೋಗಿ ಗುದ್ದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಸರಣಿ ಅಪಘಾತದಿಂದಾಗಿ ಕೆಲ ಕಾಲ ಚೆನ್ನಮ್ಮ ವೃತ್ತದಲ್ಲಿ ಸಂಚಾರಕ್ಕೆ ಅಡ್ದಿಯುಂಟಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ನಾನೇನಾದರೂ ತಪ್ಪು ಮಾಡಿದರೆ ಚೌಡೆಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ; ಮಾಜಿ ಸಚಿವ ಈಶ್ವರಪ್ಪ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ