Latest

ತಾಯಿಯ ಮರಣ; ನೊಂದ ಮಗ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ತಾಯಿಯ ಸಾವಿನಿಂದ ನೊಂದ ಮಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

25 ವರ್ಷದ ಪರಶುರಾಮ ಮಲ್ಲಪ್ಪ ನಾಯ್ಕೊಡಿ ಆತ್ಮಹತ್ಯೆಗೆ ಶರಣಾದ ಯುವಕ. ಒಂದು ವರ್ಷದ ಹಿಂದೆ ಪರಶುರಾಮನ ತಾಯಿ ಮೃತಪಟ್ಟಿದ್ದರು. ಅಂದಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ಇದೀಗ ನೇಣಿಗೆ ಶರಣಾಗಿದ್ದಾನೆ.

Home add -Advt

ಸೋದರ ಮಾವನ ತೋಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಶ್ಯಾವಾಟಿಕೆ ಕಾನೂನುಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Related Articles

Back to top button